
ಚುನಾವಣೆಯಲ್ಲಿ ಮಾಡು ಇಲ್ಲವೇ ಮಡಿ ಸಿದ್ದಾಂತ ಪಾಲನೆಗೆ ಡಾ ಪುಷ್ಪ ಅಮರನಾಥ್ ಕರೆ.
ಮುಂದೆ ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯರು ಮಾಡು ಇಲ್ಲವೇ ಮಡಿ ಸಿದ್ದಾಂತವನ್ನು ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ ಪುಷ್ಪ ಅಮರನಾಥ್ ಕರೆ ನೀಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಕಾಂಗ್ರೆಸ್ ಆಯೋಜಿಸಿದ ಗ್ಯಾಸ್ ಬೆಲೆ ಏರಿಕೆ ವಿರುದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಚುನಾವಣಾ ಪೂರ್ವ ಭಾವಿ ಸಭೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಬೂತ್ ನಲ್ಲಿ ಐದು ಜನ ಮಹಿಳಾ ಸಕ್ರಿಯ ತಂಡವನ್ನು ರಚಿಸುವಂತೆ ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಿಗೆ ಸೂಚನೆ ನೀಡಿದರು. ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ ಕೊಡಗು ಜಿಲ್ಲೆಯ ಮಹಿಳಾ ಮತದಾರರು ಬೆಲೆ ಏರಿಕೆಯಿಂದ ಬೇಸತ್ತು ಹೋಗಿದ್ದು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಿರ್ಧರಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜಾ ಉತ್ತಪ್ಪ ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬಹು ಮುಖ್ಯ ಪಾತ್ರ ವಹಿಸಲಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಈಗಾಗಲೇ ಚುನಾವಣೆ ಕಾರ್ಯತಂತ್ರಗಳನ್ನು ರೂಪಿಸಿದ್ದು ಈ ಬಾರಿ ಕಾಂಗ್ರೆಸ್ ಗೆಲುವು ಶತಸಿದ್ದ ಎಂದು ಹೇಳಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್,ಕೆಪಿಸಿಸಿ ಸದಸ್ಯ ರಮಾನಾಥ್ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ, ವಿ.ಪಿ.ಶಶಿಧರ್,ಇಸ್ಮಾಯಿಲ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್ ,ರಾಜೀವ್ ಗಾಂಧಿ ಪಂಚಾಯತ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನ, ಸೇವಾದಳದ ಅಧ್ಯಕ್ಷರಾದ ಕಾನೆ ಹಿತ್ಲು ಮೊಣ್ಣಪ್ಪ,ಕಾರ್ಮಿಕ ಘಟಕದ ಅಧ್ಯಕ್ಷರಾದ ಹಮೀದ್ಕೂಡಿಗೆ ಐ.ಎನ್.ಟಿ.ಯು.ಸಿ ಅಧ್ಯಕ್ಷರಾದ ಅಣ್ಣಯ್ಯ.ಪ್ರಮುಖರಾದ ಚುಮ್ಮಿ ದೇವಯ್ಯ, ಪ್ರಕಾಶ್ ಆಚಾರ್ಯ,ಯಶ್ದೋ ಲ್ಪಾಡಿ,ಜೆ.ಸಿ.ಜಗದೀಶ್, ರವೂಫ್ ಶೇಖ್,ವಸಂತ ಭಟ್, ರವಿಗೌಡ,ಅಬ್ದುಲ್ ರಜಾಕ್ ,ಕೋಳೆರ ಭಾರತಿ.ಬಿದ್ದಂಡ ಸುಮಿತ,ಮೀನಾಜ್ ಪ್ರವೀಣ್,ಮುಕ್ಕಾಟಿರ ಸಂದೀಪ್,ಫ್ಯಾನ್ಸಿ ಪಾರ್ವತಿ,ದಿವ್ಯಾ ಮಹಿಳಾ ಕಾಂಗ್ರೆಸ್ ಪಧಾಧಿಕಾರಿಗಳು ಕಾಂಗ್ರೆಸ್ ಮುಖಂಡರು ,ನೂರಾರು ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.
