ಶಿವಮೊಗ್ಗ ಸುಬ್ಬಣ್ಣ ಅವರ ನಿಧನ :ಸಂತಾಪ ಸೂಚಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು :ಸುಗಮ ಸಂಗೀತ ಲೋಕದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

‘ತಮ್ಮ ವಿಶಿಷ್ಟ ಕಂಠಸಿರಿಯಿಂದ ಕೇಳುಗರ ಮನಗೆದ್ದಿದ್ದ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದೆ.

ನಾಡಿನ ಪ್ರಖ್ಯಾತ ಕವಿಗಳಾದ ಕುವೆಂಪು, ಬೇಂದ್ರೆ ಮತ್ತಿತರರ ಗೀತೆಗಳಿಗೆ ಸ್ವರವಾಗಿದ್ದವರು ಸುಬ್ಬಣ್ಣ. ಅವರ ಅಗಲಿಕೆಯಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬಂಧುಗಳು ಸೇರಿದಂತೆ ಎಲ್ಲರಿಗೂ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ‘ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *