ವಿಧಾನಸಭಾ ಚುನಾವಣೆ ಸಂಬಂಧ ಇಂದು ಸ್ವೀಪ್ ಜಾಗೃತಿ ಕಾರ್ಯಕ್ರಮ

ಹುಣಸೂರು: ವಿಧಾನಸಭಾ ಚುನಾವಣೆ ಸಂಬಂಧ ಇಂದು ಸ್ವೀಪ್ ಜಾಗೃತಿ ಕಾರ್ಯಕ್ರಮ.

ಹುಣಸೂರಲ್ಲಿ ನಡೆದ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಕ್ಯಾಂಡಲ್ ಲೈಟ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ತಾಲ್ಲೂಕು ಪಂಚಾಯಿತಿಯಿಂದ ಸಂವಿಧಾನ ವೃತ್ತದವರೆಗೂ ಜಾಥಾ ಸಾಗಿತು. ಈ ವೇಳೆ ಮೇ.10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡುವಂತೆ ವಿವಿಧ ಘೋಷಣೆಗಳನ್ನು ಕೂಗಲಾಯಿತು. ಬಳಿಕ ಸಂವಿಧಾನ ವೃತ್ತದ ಬಳಿ‌ಮಾನವ ಸರಪಳಿಯನ್ನು ನಿರ್ಮಿಸಲಾಯಿತು. ಜೊತೆಗೆ “ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯಿಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ” ಎಂದು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

ಜಾಗೃತಿ ಜಾಥಾದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕರಾದ ಮನು ಬಿ.ಕೆ, ನರೇಗಾ ಸಹಾಯಕ ನಿರ್ದೇಶಕರಾದ ಹೆಚ್.ಡಿ.ಲೋಕೇಶ್, ನಗರ ಸಭೆ ಅಭಿಯಂತರವರಾದ ರೂಪ, ಹಿರಿಯ ಆರೋಗ್ಯಾಧಿಕಾರಿ ಸತೀಶ್, ಸೆಕ್ಟರ್ ಅಧಿಕಾರಿಯವರಾದ ರಾಮಣ್ಣ, ತಾಲ್ಲೂಕು ಯೋಜನಾಧಿಕಾರಿ ರಾಜೇಶ್ ಸೇರಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್, ದ್ವಿ.ದ.ಲೆ.ಸಹಾಯಕರು, ಡಿಇಒಗಳು, ತಾಲ್ಲೂಕು ಪಂಚಾಯಿತಿ ಮತ್ತು ನಗರ ಸಭೆ ಸಿಬ್ಬಂದಿ ವರ್ಗದವರು ಹಾಗೂ ಸಂಜೀವಿನಿ ಒಕ್ಕೂಟದ ಮಹಿಳೆಯರು ಪಾಲ್ಗೊಂಡಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *