ಟಿ.ನರಸೀಪುರ: ಸಂವಿಧಾನ ಸಂರಕ್ಷಣೆಗಾಗಿ ಕರ್ನಾಟಕ ರಾಜ್ಯವ್ಯಾಪ್ತಿ ಜೈ ಭೀಮ್ ಜನಜಾಗೃತಿ ಜಾಥಾ.
ಸಂವಿಧಾನ ಸಂರಕ್ಷಣೆಗಾಗಿ ಕರ್ನಾಟಕ ರಾಜ್ಯವ್ಯಾಪ್ತಿ ಜೈ ಭೀಮ್ ಜನಜಾಗೃತಿ ಜಾಥಾವನ್ನು ಬಹುಜನ ಸಮಾಜ ಪಾರ್ಟಿ ವತಿಯಿಂದ ಹಮ್ಮಿಕೊಂಡಿದ್ದು,ಟಿ.ನರಸೀಪುರ ವಿಧಾನ ಸಭಾ ಕ್ಷೇತ್ರದಲ್ಲಿ ಇದೇ ತಿಂಗಳು 9 ನೇ ತಾರೀಖು ಟಿ.ಎ.ಪಿ.ಸಿ.ಎಂ.ಎಸ್.ಆವರಣದಲ್ಲಿ ಹಮ್ಮಿಕೊಂಡಿರುವುದಾಗಿ ಬಿಎಸ್ಸಿ ಮೈಸೂರು ಜಿಲ್ಲಾಧ್ಯಕ್ಷ ಬಿ.ಆರ್.ಪುಟ್ಟಸ್ವಾಮಿ ತಿಳಿಸಿದರು.
ಪಟ್ಟಣದ ಸರ್ಕಾರಿ ಅತಿಥಿ ಗೃಹದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ.ಇದರ ವಿರುದ್ಧ ಮಾತನಾಡಬೇಕಿದ್ದ ವಿರೋಧ ಪಕ್ಷ ಕಾಂಗ್ರೆಸ್ ಸೇರಿದಂತೆ ಯಾವುದೇ ಮನುವಾದಿ ಪಕ್ಷಗಳು ಧ್ವನಿ ಎತ್ತಿ ಹೋರಾಟ ಮಾಡಲಿಲ್ಲ.
ಆದರೆ ಬಿಎಸ್ಸಿ ಸಂವಿಧಾನವನ್ನೇ ತನ್ನ ಪ್ರಣಾಳಿಕೆ ಮಾಡಿಕೊಂಡು ಸಂವಿಧಾನವನ್ನು ಅರ್ಥೈಸುವಂತಹ ಕೆಲಸಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದರು.
ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ರಾಷ್ಟ್ರ ಹಾಗೂ ರಾಜ್ಯ ನಾಯಕರು ಆಗಮಿಸುತ್ತಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮ ಯಶಸ್ವಿಗೊಳಿಸಿಕೊಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಬಿ.ಮಹದೇವಸ್ವಾಮಿ,ಸಂಯೋಜಕ ಆದಿಬೆಟ್ಟಹಳ್ಳಿ ಕುಮಾರ್,ಕ್ಷೇತ್ರ ಉಸ್ತುವಾರಿ ಕೈಯಂಬಳ್ಳಿ ಪುಟ್ಟಸ್ವಾಮಿ, ಉಪಾಧ್ಯಕ್ಷ ಕೆ.ಎನ್.ಆನಂದ್,ಖಜಾಂಚಿ ಪುಟ್ಟರಾಜು,ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಪುಟ್ಟ ಮರುಡಯ್ಯ ಹಾಗೂ ಹೊಸಪುರ ನಿಂಗರಾಜು ಇದ್ದರು.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.