ಬಿಹಾರ ವಲಸಿಗನ ಹತ್ಯೆ ಕಾಶ್ಮೀರದಲ್ಲಿ ಉಗ್ರಗಾಮಿಗಳ ಅಟ್ಟಹಾಸ

ನವದೆಹಲಿ: ಬಿಹಾರ ವಲಸಿಗನ ಹತ್ಯೆ ಕಾಶ್ಮೀರದಲ್ಲಿ ಉಗ್ರಗಾಮಿಗಳ ಅಟ್ಟಹಾಸ.

ನಿನ್ನೆ ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯ ಸೋದನಾರಾ ಸುಂಬಲ್ನಲ್ಲಿ ಬಿಹಾರದ ಕಾರ್ಮಿಕನೊಬ್ಬನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಕಾರ್ಮಿಕನನ್ನು ಮೊಹಮ್ಮದ್ ಅಮ್ರೆಜ್ ಎಂದು ಗುರುತಿಸಲಾಗಿದೆ .ಇವರು ಬಿಹಾರದ ಮಾಧೇಪುರದವರು . ಕಣಿವೆಯಲ್ಲಿ ಇತ್ತೀಚಿನ ದಿನಗಳಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆಗಳು ತೀವ್ರಗೊಂಡಿದೆ. ಆತ್ಮಹುತಿ ಬಾಂಬ್ ದಾಳಿ ನಡೆಸಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗುದೆ.ಈ ಸಂದರ್ಭದಲ್ಲಿ ಮೂವರು ಸೇನಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *