ಹವಾಮಾನ ವರದಿ ರಾಜ್ಯದಲ್ಲಿ ಕಾವೇರಲಿದೆ‌ ಬಿಸಿಲು ಮುಂದಿನ 3 ತಿಂಗಳು‌ ದೇಶಾದ್ಯಂತ ಕಾಡಲಿದೆ ಬಿಸಿಗಾಳಿ, ಬಿಸಿಲ ಝಳ

ಹವಾಮಾನ ವರದಿ ರಾಜ್ಯದಲ್ಲಿ ಕಾವೇರಲಿದೆ‌ ಬಿಸಿಲು ಮುಂದಿನ 3 ತಿಂಗಳು‌ ದೇಶಾದ್ಯಂತ ಕಾಡಲಿದೆ ಬಿಸಿಗಾಳಿ, ಬಿಸಿಲ ಝಳ

ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಈ ನಡುವೆ ಮುಂದಿನ ಮೂರು ತಿಂಗಳು ರಣಬಿಸಿಲು ಇರಲಿದ್ದು, ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಅಂದರೆ 2ರಿಂದ 8 ದಿನಗಳ ಕಾಲ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ.
ಏಪ್ರಿಲ್ ನಿಂದ ಜೂನ್ ತಿಂಗಳ ಅವಧಿಯಲ್ಲಿ ಬಯಲುಸೀಮೆಯ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಬೀಸಲಿದೆ. ಇದು ಲೋಕಸಭಾ ಚುನವಣೆಯ ಮತದಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸ್ ಗಢ, ಆಂಧ್ರಪ್ರದೇಶಗಳಲ್ಲಿ ಬಿಸಿಗಾಳಿ ಕೆಟ್ಟ ಪರಿಣಾಮ ಬೀರುವ ಮುನ್ಸೂಚನೆ ಇದೆ. ಈ ಸಮಯದಲ್ಲಿ ಸುಮಾರು 10-20 ದಿನಗಳ ವರೆಗೆ ಉಷ್ಣ ಅಲೆ ಇರಲಿದೆ.ಹವಾಮಾನ ಇಲಾಖೆ ಮಾಹಿತಿ ಪ್ರಮಾಕ ಮಾರ್ಚ್ ತಿಂಗಳ ಮಧ್ಯಭಾಗದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಬೆಳಗಾವಿ, ಕೊಡಗು, ವಿಜಯಪುರದ ಕೆಲ ಭಾಗಗಳನ್ನು ಹೊರತುಪಡಿಸಿದರೆ ಉಳಿದಕಡೆ ಮಳೆಯ ಸುಳಿವಿಲ್ಲ. ಒಟ್ಟಾರೆ ಮುಂದಿನ ದಿನಗಳಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಬಿಸಿಗಾಳಿ ಜನರನ್ನು ಇನ್ನಷ್ಟು ಹೈರಾಣಾಗಿಸಲಿದೆ.

ವರದಿ :ನಂದಿನಿ ಮೈಸೂರು

https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

Leave a Reply

Your email address will not be published. Required fields are marked *