ಚಾಮರಾಜನಗರ: ಮಳೆಯಿಂದ ಹಾನಿಯಾಗಿರುವ ಹಾಗೂ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಭೇಟಿ ಪರಿಶೀಲನೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮತ್ತು ಯಳಂದೂರು ತಾಲೂಕು ಪಟ್ಟಣದಲ್ಲಿ ಮಳೆಯಿಂದ ಹಾನಿಯಾಗಿರುವ ಹಾಗೂ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಭೇಟಿ ಪರಿಶೀಲನೆ .
ಚಾಮರಾಜನಗರ ಜಿಲ್ಲೆಯಲ್ಲಿಕೆಲವು ದಿನಗಳಿಂದ ಸತತವಾಗಿ ಬೀಳುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾಮರಾಜ ನಗರದ ಸಮೀಪವಿರುವ ಚಿಕ್ಕಹೊಳೆ ಹಾಗೂ ಸುವರ್ಣಾವತಿ ಜಲಾಶಯದ ಒಳ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ 2ಜಲಾಶಯಗಳಿಂದ ಅಪಾರ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವ ಕಾರಣ ಜಲಾವೃತಗೊಂಡಿರುವ ಕೊಳ್ಳೇಗಾಲದ ಸರ್ ಕಾಟನ್ ಕಾಲುವೆ ವೀಕ್ಷಣೆ ಮಾಡಿದರು. ನಂತರ ಮಾಂಬಳ್ಳಿಯಲ್ಲಿ ಗ್ರಾಮಸ್ಥರ ಅಹವಾಲು ಆಲಿಸಿ ಹಾನಿಯಾಗಿರುವ ಮನೆಗಳನ್ನು ಪರಿಶೀಲಿಸಿದರು. ತಕ್ಷಣವೇ ಪರಿಹಾರ ಮಂಜೂರು ಪತ್ರಹಾಗೂ ಫುಡ್ ಕಿಟ್ ವಿತರಿಸಿದರು .
ನಂತರ ಅಗರದಲ್ಲಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.
ನಂತರ ಯಳಂದೂರು ತಾಲ್ಲೂಕಿನ ಮದ್ದೂರು ಹಾಗೂ ಅಂಬಳೆ ಗ್ರಾಮಕ್ಕೆ ಭೇಟಿ ನೀಡಿ ನೆರೆಯಿಂದ ಹಾನಿಯಾಗಿರುವ ಗ್ರಾಮಸ್ಥರು ಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು .ಶೀಘ್ರವೇ ಪರಿಹಾರ ಮಂಜೂರು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವರದಿ : ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.