ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿಂಗ್ ಮೊದಲ ಪದವಿ ದಿನ
ಮೈಸೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ನಗರದ ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿಂಗ್ (ವಿವಿಸಿಇ) ತನ್ನ ಮೊದಲ ಪದವಿ ದಿನವನ್ನು ಆಚರಿಸುತ್ತಿದೆ. ಕಾಲೇಜಿನ ಕ್ಯಾಂಪಸ್ ನಲ್ಲಿ ಆ.3ರ ಶನಿವಾರದಂದು ಬೆಳಗ್ಗೆ 10 ಗಂಟೆಗೆ ಪದವಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ನಗರದ ಪತ್ರಕರ್ತರ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ವಿವಿಸಿಇ ಪಾಂಶುಪಾಲರಾದ ಡಾ.ಬಿ.ಸದಾಶಿವೇಗೌಡ ಮಾತನಾಡಿ,
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪದವಿ ದಿನದ ಭಾಷಣ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶ್ರೀ ಗುಂಡಪ್ಪ ಗೌಡ ವಹಿಸಲಿದ್ದಾರೆ. ಸಂಘದ ಉಪಾಧ್ಯಕ್ಷ ಶ್ರೀ ಬಿ.ಶಿವಲಿಂಗಪ್ಪ ಹಾಗೂ ಗೌರವ ಕಾರ್ಯದರ್ಶಿ ಶ್ರೀ ಪಿ.ವಿಶ್ವನಾಥ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಡೀನ್ ಅಕಾಡೆಮಿಕ್ಸ್ ಮತ್ತು ಉಪ ಪ್ರಾಂಶುಪಾಲರಾದ ಡಾ. ಶೋಭಾ ಶಂಕರ್, ಪರೀಕ್ಷಾಂಗ ನಿಯಂತ್ರಕರಾದ ಡಾ.ಸುದೇವ್ ಎಲ್.ಜೆ. ಸಮಾರಂಭದಲ್ಲಿ ಭಾಗವಹಿಸುವರು ಎಂದರು.
812 ವಿದ್ಯಾರ್ಥಿಗಳಿಗೆ ಪದವಿ 2023-24 ನೇ ಸಾಲಿನ ಪದವಿ ದಿನಾಚರಣೆಯಲ್ಲಿ ಕಾಲೇಜಿನ 812 ಅಭ್ಯರ್ಥಿಗಳು ಬಿ.ಇ. ಪದವಿ ಪ್ರಮಾಣಪತ್ರಗಳನ್ನು ಬೆಳಗಾವಿ ವಿಟಿಯು ಕುಲಪತಿಗಳಿಂದ ಪಡೆದುಕೊಳ್ಳಲಿದ್ದಾರೆ. 58 ಪ್ರತಿಭಾನ್ವಿತ ವಿದ್ಯಾರ್ಥಿಗಳು ರ್ಯಾಂಕ್ ಪಡೆದುಕೊಂಡಿದ್ದಾರೆ. ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ನ ಶ್ರೀನಿಧಿ ಎಸ್. ಕಾಲೇಜು ಟಾಪರ್ ಆಗಿದ್ದು, ನಗದು ಬಹುಮಾನವನ್ನೂ ಪಡೆಯುತ್ತಿದ್ದಾರೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ನ ಭವಾನಿ ಎ. “ವಿವಿಸಿಇ – ಸರಶಿಜಾ ಎಕ್ಸಲೆನ್ಸ್ ಎಂಡೋಮೆಂಟ್ ಪ್ರಶಸ್ತಿ” ಸ್ವೀಕರಿಸುತ್ತಾರೆ.
ಸಮಾರಂಭದಲ್ಲಿ ಮೈಸೂರಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ನಿರ್ದೇಶಕರು ಮತ್ತು ವಿದ್ಯಾವರ್ಧಕ ಸಂಘದ ಸದಸ್ಯರು, ವಿಶೇಷ ಆಹ್ವಾನಿತರು ಮತ್ತು ಪದವೀಧರರ ಪೋಷಕರು ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಡೀನ್ ಅಕಾಡೆಮಿಕ್ಸ್ ಮತ್ತು ಉಪ ಪ್ರಾಂಶುಪಾಲರಾದ ಡಾ. ಶೋಭಾ ಶಂಕರ್, ಪರೀಕ್ಷಾಂಗ ನಿಯಂತ್ರಕರಾದ ಡಾ.ಸುದೇವ್ ಎಲ್.ಜೆ. ಇದ್ದರು
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link