ಎರಡನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಅಮ್ಮನವರ ಪೂಜಾ ಕೈಂಕರ್ಯ ಜರುಗಿತು.
ಆಷಾಢ ಶುಕ್ರವಾರದಂದು ಶಕ್ತಿ ದೇವತೆಯನ್ನು ಪೂಜಿಸಿದವರಿಗೆ ವಿಘ್ನಗಳು ನಿವಾರಣೆಯಾಗಿ, ಇಷ್ಟಾರ್ಥ ಸಿದ್ಧಿಸುತ್ತದೆ ಅನ್ನೋ ನಂಬಿಕೆಯಿದೆ.ಈ ಹಿನ್ನೆಲೆ
ಎರಡನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ರು.ಭಕ್ತರಿಗಾಗಿ ಉಚಿತ ಬಸ್ ನಲ್ಲಿ ಪ್ರಯಾಣಿಸಿದರೇ ಮತ್ತೆ ಕೆಲ ಭಕ್ತರು ಮೆಟ್ಟಿಲು ಹತ್ತಿ ಬಂದು ತಾಯಿಯ ದರ್ಶನ ಪಡೆಯುತ್ತಿದ್ದ ದೃಶ್ಯ ಕಂಡುಬಂದಿತ್ತು.
ಚಾಮುಂಡೇಶ್ವರಿ ದೇವಾಲಯದ ಪ್ರದಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷೀತರ ನೇತೃತ್ವದಲ್ಲಿ ಮುಂಜಾನೆ ತಾಯಿಗೆ ಎಲ್ಲಾ ಬಗೆಯ ಅಭಿಷೇಕ ಅರ್ಚನೆ ಸೇರಿದಂತೆ ಪೂಜಾ ಕೈಂಕರ್ಯ ಜರುಗಿತು.ಹರಕೆ ಕಟ್ಟಿಕೊಂಡ ಭಕ್ತರು ದೇವಾಲಯದ ಸುತ್ತಾ ಹೂವಿನ ಅಲಂಕಾರ ಮಾಡಿದರು.ಹೂವಿನ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು.ಎರಡನೇ ಆಷಾಢವಾದ ಇಂದು ಚಾಮುಂಡೇಶ್ವರಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ಮೈಸೂರು ಮಾತ್ರವಲ್ಲದೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಲಕ್ಷಾಂತರ ಭಕ್ತರು ಸಹ 2ನೇ ಆಷಾಢ ಶುಕ್ರವಾರದ ಪೂಜೆಗೆ ಆಗಮಿಸಿ ಅಮ್ಮನವರ ದರ್ಶನ ಪಡೆದರು.
ಇನ್ನು ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.
ಬೆಟ್ಟಕ್ಕೆ ಹೋಗಲು ಭಕ್ತರಿಗೆ ಜಿಲ್ಲಾಡಳಿತ 50 ಕೆಎಸ್‌ಆರ್‌ಟಿಸಿ ಬಸ್ಸಿನ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಾ ಮಹಲ್ ಹೆಲಿಪ್ಯಾಡ್ ಸಮೀಪದಿಂದ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಲಲಿತಾ ಮಹಲ್ ಪ್ಯಾಲೇಸ್ ಹೆಲಿಪ್ಯಾಡ್‌ನಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇನ್ನು ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 300 ಮತ್ತು 50 ರೂಪಾಯಿ ಟಿಕೆಟ್ ವ್ಯವಸ್ಥೆ ಇದೆ.ಕಳ್ಳತನ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಗಸ್ತಿನಲ್ಲಿ ಪೋಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನುತ್ತಾರೆ ಡಿಸಿಪಿ ಮುತ್ತುರಾಜ್.
ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಹರಕೆ ಹೊತ್ತಿರುವವರು ಪ್ರಸಾದ ಹಾಗೂ ಊಟದ ವ್ಯವಸ್ಥೆ ಮಾಡಿದರು.ಸರತಿ ಸಾಲಿನಲ್ಲಿ ನಿಂತು ಜನರು ಪ್ರಸಾದ ಸ್ವೀಕರಿಸಿ ಉಚಿತ ಬಸ್ ನಲ್ಲಿ ಮನೆಯತ್ತ ತೆರಳಿದರು.
ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.