ಬೆಳಗಾವಿ: ಯುವ ಕ್ರಾಂತಿ ಸಮಾವೇಶಕ್ಕೆ ಪಾಲ್ಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಟ ರಾಹುಲ್ ಗಾಂಧಿ.
ಯುವ ಕ್ರಾಂತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸೋಮವಾರ ಬಂದಿಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ರಾಹುಲ್ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತಿತರರು ಇದ್ದರು.